ಎಲ್ಲರಿಗೂ ನಮಸ್ಕಾರ, ಭಾರತೀಯ ಸೇನೆ /ಯುನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2025-26 ಸಾಲಿನಲ್ಲಿ ಉಚಿತವಾಗಿ ಆಯ್ಕೆ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡುತ್ತಿದ್ದು ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಯು 10ನೇ ತರಗತಿಯನ್ನು ಪಾಸಾಗಿರಬೇಕು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳು ಮತ್ತು ಸರಾಸರಿ ಶೇ.45 ಅಂಕಗಳನ್ನು ಪಡೆದಿರಬೇಕು. (ಅಂಕಪಟ್ಟಿಯ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು)
ವಯೋಮಿತಿ:
ಜನ್ಮ ದಿನಾಂಕ ಮತ್ತು ವಯಸ್ಸು (10ನೇ ತರಗತಿಯ ಅಂಕ ಪಟ್ಟಿಯಲ್ಲಿರುವಂತೆ) ಡಿಸೆಂಬರ್ 31, 2023 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸನ್ನು ಪರಿಗಣಿಸಲಾಗುವುದು, ಅಭ್ಯರ್ಥಿಯು 01 ಜನವರಿ 2003 ರಿಂದ 01 ಜುಲೈ 2006 (17% ವರ್ಷದಿಂದ 21 ವರ್ಷ) ರ ದಿನಾಂಕಗಳ ನಡುವೆ ಜನಿಸಿರಬೇಕು.
ವಾರ್ಷಿಕ ಆದಾಯ:
ವಿದ್ಯಾರ್ಥಿಯ ಕುಟುಂಬದ ಒಟ್ಟು ವಾರ್ಷಿಕ ಆದಾಯ (ಅಭ್ಯರ್ಥಿಯ ಹೆಸರಿನಲ್ಲಿ ಪಡೆದಿರುವ & ಚಾಲ್ತಿಯಲ್ಲಿರುವ ಆದಾಯ ಪ್ರಮಾಣ ಪತ್ರದ ಪ್ರತಿಯನ್ನು ಲಗತ್ತಿಸುವುದು) ಗರಿಷ್ಠ ವಾರ್ಷಿಕ ಆದಾಯ ಮಿತಿ ಪ್ರವರ್ಗ-2ಎ, 3ಎ, ಮತ್ತು 3ಬಿ, ಅಭ್ಯರ್ಥಿಗಳಿಗೆ 1 ಲಕ್ಷ ರೂ.
ಅರ್ಜಿ ಸಲ್ಲಿಸುವ ವಿಧಾನ:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿದಾರರು ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಮಯ ಬೆಳಿಗ್ಗೆ 10.30 ರಿಂದ ಸಂಜೆ 5.30 ರ ವರೆಗೆ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಿ ಮಾಹಿತಿಯನ್ನು ಪಡೆದುಕೊಳ್ಳಬಹುದು.
Free Coaching Application: Get More Info
ಇತರೆ ಮಾಹಿತಿಗಳನ್ನು ಓದಿ:
ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ವಿದ್ಯಾಸಿರಿ ವಿದ್ಯಾರ್ಥಿವೇತನ ಮೊತ್ತ ಹೆಚ್ಚಳ..!