ಎಲ್ಲರಿಗೂ ನಮಸ್ಕಾರ, ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್, ನಿಮಗೂ ಕೂಡ ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ಲವೆ..? ಗೃಹಲಕ್ಷ್ಮೀ ಯೋಜನೆಯ ಹಣವು (Gruhalakshmi Amount) ಯಾವಾಗ ಸಂದಾಯವಾಗಲಿದೆ ಎಂದು ಕಾಯುತ್ತಿದ್ದೀರಾ..? ಹಾಗಿದ್ದರೆ ಚಿಂತೆ ಬಿಡಿ ಈ ಲೇಖನದಲ್ಲಿ ಮಾಹಿತಿ ನೀಡಲಿದ್ದೇವೆ ಓದಿರಿ.
ರಾಜ್ಯ ಸರ್ಕಾರವು ಗೃಹಲಕ್ಷ್ಮೀ ಯೋಜನೆಯನ್ನು ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಗೆ ತಂದಿದ್ದಾರೆ. ಈ ಯೋಜನೆಯ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿಗಳನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡುತ್ತಾರೆ. ಗೃಹಲಕ್ಷ್ಮೀ ಹಣದಿಂದ ಸಾಕಷ್ಟು ಮಹಿಳೆಯರಿಗೆ ಉಪಯೋಗವಾಗಿದೆ.
Gruhalakshmi Amount 2025:
ಕಳೆದ ಎರಡು ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಯೋಜನೆಯ ಹಣವು ಫಲಾನುಭವಿಗಳ ಖಾತೆಗೆ ಜಮಾ ಆಗದ ಕಾರಣ ಎಂದು ಮಹಿಳೆಯರು ಆತಂಕಗೊಂಡಿದ್ದರು. ಆದರೆ ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗೃಹಿಣಿಯರಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಬೆಳಗಾವಿ ನಗರದ ಗೃಹ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವೆ ಹೆಬ್ಬಾಳ್ಕರ್ ಅವರು, ಈ ಮೊದಲಿನಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರ ಮೂಲಕವೇ ಗೃಹಲಕ್ಷ್ಮೀ ಯೋಜನೆ ಹಣವು ಫಲಾನುಭವಿಗಳ ಖಾತೆಗೆ ಜಮೆ ಆಗಲಿದೆ.
ಈಗಾಗಲೇ ತಾಲೂಕು ಪಂಚಾಯಿತಿ ಖಾತೆಗಳಿಗೆ ಗೃಹಲಕ್ಷ್ಮೀ ಯೋಜನೆಯ ಹಣವು ರಾಜ್ಯ ಸರಕಾರದಿಂದ ಜಮೆ ಆಗಿದೆ. ಅಲ್ಲಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ರವಾನೆಯಾಗುವುದು ವಿಳಂಬವಾಗಿದೆ. ಹೀಗಾಗಿ ಫಲಾನುಭವಿಗಳ ಖಾತೆಗೆ ಹಣ ಜಮೆ ಆಗುವುದು ತಡವಾಗಿದೆ. ತಾಲೂಕು ಪಂಚಾಯತ್‌ಗಳಿಂದ ಹಣ ವರ್ಗಾವಣೆಗೆ ಕ್ರಮ ವಹಿಸಲಾಗಿದ್ದು, ಶೀಘ್ರವಾಗಿ ಉಪ ನಿರ್ದೇಶಕರ ಮೂಲಕ ಹಣ ಪಾವತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವೆಯಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ.
ಇತರೆ ಮಾಹಿತಿಗಳನ್ನು ಓದಿ: