ಎಲ್ಲರಿಗೂ ನಮಸ್ಕಾರ, ಕೇಂದ್ರ ಸರ್ಕಾರವು ರೈತರಿಗಾಗಿ PM ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಜಾರಿಗೆ ತಂದಿದೆ, ನೀವು ಕೂಡ ಈ ಯೋಜನೆಯ ಫಲಾನುಭವಿಗಳಾ..? ಹಾಗಿದ್ದರೆ ಇಲ್ಲಿದೆ ನಿಮಗೆ ಗುಡ್ ನ್ಯೂಸ್. PM ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19 ನೇ ಕಂತಿನ ಹಣವು (PM Kisan 19th Installment Date) ಯಾವಾಗ ನಿಮ್ಮ ಖಾತೆಗೆ ಸಂದಾಯವಾಗಲಿದೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.
PM ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಇದುವರೆಗೂ ಕೋಟ್ಯಾಂತರ ರೈತರು ಅರ್ಜಿಯನ್ನು ಸಲ್ಲಿಸಿ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ. ಯಾರು ಇದುವರೆಗೂ ಅರ್ಜಿ ಸಲ್ಲಿಸಿಲ್ಲ ಅಂತವರು ಅರ್ಜಿ ಸಲ್ಲಿಸಿ PM ಕಿಸಾನ್ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಗೆ ಅರ್ಜಿ ಸಲ್ಲಿಸಿದ ರೈತರಿಗೆ ವಾರ್ಷಿಕವಾಗಿ 6,000 ರೂ. ಗಳನ್ನು ಅವರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ. ಈ ಯೋಜನೆಯ ಹಣವನ್ನು ಪ್ರತಿ 4 ತಿಂಗಳಿಗೊಮ್ಮೆ 2,000 ರೂ. ಅಂತೆ ಅವರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ.
PM Kisan 19th Installment Date:
PM ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18 ನೇ ಕಂತಿನ ಹಣವನ್ನು 05-10-2024 ರಂದು ರೈತರ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಫಲಾನಿಭವಿಗಳು 19 ನೇ ಕಂತಿನ ಹಣವು ಯಾವಾಗ ತಮ್ಮ ಖಾತೆಗೆ ಜಮಾ ಆಗಲಿದೆ ಎಂದು ಕಾಯುತ್ತಿದ್ದಾರೆ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇದೇ ತಿಂಗಳು ಫೆಬ್ರವರಿ 24 ರಂದು ಬಿಹಾರ ಪ್ರವಾಸ ಕೈಗೊಳ್ಳಲಿದ್ದು, ಈ ಸಮಯದಲ್ಲಿ PM ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19 ನೇ ಕಂತಿನ ಹಣವನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಯಾರು PM ಕಿಸಾನ್ ಯೋಜನೆಗೆ eKYC ಮಾಡಿಸಿಕೊಂಡಿರುವುದಿಲ್ಲ ಅಂವರು ಕೂಡಲೇ ಇ-ಕೆವೈಸಿ ಮಾಡಿಸಿಕೊಳ್ಳಿ. ಹಾಗೂ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆಯಾ ಎಂಬುದನ್ನು ಚೆಕ್ ಮಾಡಿಸಿಕೊಳ್ಳಿ. ಒಂದು ವೇಳೆ ಆಧಾರ್ ಲಿಂಕ್ ಆಗದಿದ್ದರೆ ಕೂಡಲೇ ಲಿಂಕ ಮಾಡಿಸಿಕೊಳ್ಳಬೇಕು.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ eKYC ಅನ್ನು ಪಿಎಂ ಕಿಸಾನ್ ಅಧಿಕೃತ ವೆಬ್‌ಸೈಟ್ ನಲ್ಲಿ ಕೆವೈಸಿ ಮಾಡಿಕೊಳ್ಳಬಹುದು ಅಥವಾ ನಿಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರದಲ್ಲಿ (CSC) ಭೇಟಿ ನೀಡಿ eKYC ಮಾಡಿಸಿಕೊಳ್ಳಬಹುದು.
ಇ-ಕೆವೈಸಿ ಹಾಗೂ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದೆ ಇದ್ದರೆ PM ಕಿಸಾನ್ ಯೋಜನೆಯ 19 ನೇ ಕಂತಿನ ಹಣವು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುದಿಲ್ಲ. ಆದ್ದರಿಂದ ಕೂಡಲೇ ರೈತರು eKYC ಮಾಡಿಸಿಕೊಳ್ಳಿ.
ಇತರೆ ಮಾಹಿತಿಗಳನ್ನು ಓದಿ: