ಎಲ್ಲರಿಗೂ ನಮಸ್ಕಾರ, ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ವಿದ್ಯಾಸಿರಿ ವಿದ್ಯಾರ್ಥಿವೇತನ ಮೊತ್ತವನ್ನು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಎಷ್ಟು ಹಣವನ್ನು ಹೆಚ್ಚಿಗೆ ಮಾಡಲಿದ್ದಾರೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಓದಿರಿ.
ಹಿಂದುಳಿದ ವರ್ಗಕ್ಕೆ ಸೇರಿದ ಬಡ ವಿದ್ಯಾರ್ಥಿಗಳಿಗೆ ಅವರ ಉನ್ನತ ಶಿಕ್ಷಣವನ್ನು ಮುಂದುವರೆಸಲು ಆರ್ಥಿಕ ನೇರವು ನೀಡುವ ಸಲುವಾಗಿ ವಿದ್ಯಾಸಿರಿ ಶಿಷ್ಯವೇತನವನ್ನು ಸರ್ಕಾರ ಜಾರಿಗೆ ತಂದಿದೆ. ವಿದ್ಯಾಸಿರಿ ಯೋಜನೆಯಿಂದ ಸಾಕಷ್ಟು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಪಯೋಗವಾಗಿದೆ.
ಹಿಂದುಳಿದ ಸಮುದಾಯದ ಮಕ್ಕಳು ಹೆಚ್ಚು ಶಿಕ್ಷಿತರಾಗಬೇಕು. ಆದ್ದರಿಂದ ‘ವಿದ್ಯಾಸಿರಿ’ ಮೊತ್ತವನ್ನು ಪ್ರತಿ ವಿದ್ಯಾರ್ಥಿಗೆ 1,500 ರೂ. ರಿಂದ 2,000 ಕ್ಕೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಯೋಜನಗಳು:
ವಿದ್ಯಾಸಿರಿ ಯೋಜನೆಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಈ ಯೋಜನೆಯಡಿ “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಸೌಲಭ್ಯ ದೊರೆಯುತ್ತದೆ.
ಅಗತ್ಯ ದಾಖಲೆಗಳು:
- ಆಧಾರ್ ಸಂಖ್ಯೆ ಮತ್ತು ಆಧಾರ್ ನಲ್ಲಿ ಇರುವ ಹಾಗೆ ಹೆಸರು
- ಮೊಬೈಲ್ ನಂಬರ್
- ಇಮೇಲ್ ಐಡಿ
- SSLC ನೋಂದಣಿ ಸಂಖ್ಯೆ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಆರ್.ಡಿ ಸಂಖ್ಯೆ
- ವಿಧಾನಸಭಾ ಕ್ಷೇತ್ರದ ಹೆಸರು ಮತ್ತು ಮನೆಯ ವಿಳಾಸ
ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯು.ಡಿ.ಐ.ಡಿ ಗುರುತಿನ ಸಂಖ್ಯೆ - ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯು.ಡಿ.ಐ.ಡಿ ಗುರುತಿನ ಸಂಖ್ಯೆ
- ವಿದ್ಯಾರ್ಥಿಯ ಕಾಲೇಜು ದಾಖಲಾತಿ/ನೋಂದಣಿ ಸಂಖ್ಯೆ
- ಸಂಬಂದಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ (ಅನ್ವಯವಾದಲ್ಲಿ)
- ಹಾಸ್ಟೆಲ್ ವಿವರಗಳು (ಅನ್ವಯವಾದಲ್ಲಿ)